ಸಿವಿಲ್ ಪಿಎಸ್’ಐ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತ್ತು ಕಲ್ಯಾಣ-ಕರ್ನಾಟಕ + ಪ್ರದೇಶದ ಸ್ಥಳೀಯ ಹುದ್ದೆಗಳ ನೇಮಕಾತಿಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ರಾಜ್ಯದಲ್ಲಿ ಲಾಕ್’ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿರುವ ಕುರಿತು ಪೊಲೀಸ್ ಇಲಾಖೆ ಪ್ರಕಟಣೆ ಪ್ರಕಟಿಸಿದೆ.

ಪ್ರಸ್ತುತ ರಾಜ್ಯದಲ್ಲಿನ ಲಾಕ್’ಡೌನ್ ಪರಿಸ್ಥಿತಿ ಪರಿಗಣಿಸಿ ಆಡಳಿತಾತ್ಮಕ ಕಾರಣಗಳಿಂದ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಈಗಾಗಲೇ ಇದ್ದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 20-05-2021 ರಿಂದ 31-05-2021 ರವರೆಗೆ ಅವಕಾಶ ಕಲ್ಪಸಿದ್ದು, ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ದಿನಾಂಕ 24-05-2021 ರಿಂದ 02-06-2021 ರವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್)  ನೇಮಕಾತಿ ಸಮಿತಿಯ ಅಧ್ಯಕ್ಷರಾದ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರು ತಿಳಿಸಿದ್ದಾರೆ.

ಉಲ್ಲೇಖಿತ ಅಧಿಸೂಚನೆ ದಿನಾಂಕ: 03.03.2021 ರಲ್ಲಿ ಈಗಾಗಲೇ ನಿಗದಿಪಡಿಸಿರುವಂತೆ ದಿ. 03.05.2021 ಯನ್ನೇ ವಯೋಮಿತಿಯ ಕೊನೆಯ ದಿನಾಂಕವನ್ನಾಗಿ ಪರಿಗಣಿಸಲಾಗಿದೆ. 

ಆದರೆ ಜಾತಿ ಮತ್ತು ಆದಾಯ ಮೀಸಲಾತಿ ಹಾಗೂ ಇತರೆ ದಾಖಲೆಗಳಿಗೆ ವಿಸ್ತರಿಸಿದ ದಿನಾಂಕ 31-05-2021 ನ್ನು ಕೊನೆಯ ದಿನಾಂಕವಾಗಿ ಪರಿಗಣಿಸಲಾಗುವುದು ಹಾಗೂ ಉಳಿದಂತೆ ಸದರಿ ಅಧಿಸೂಚನೆಯಲ್ಲಿ ನೀಡಿರುವ ಇತರೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನೇಮಕಾತಿ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

EventsOld DateNew Date
Application Last Date20-05-202131-05-2021
Fee Last Date24-05-202102-06-2021

Download PSI Application Date Extension Notification : Download

1 thought on “ಸಿವಿಲ್ ಪಿಎಸ್’ಐ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ”

Leave a Comment