Mahitiloka.com-Telegram-Channel
mahitiloka-whatsapp-group-links

FDA ಅಂತಿಮ ಆಯ್ಕೆ ಪಟ್ಟಿ ಪ್ರಕಟ (HK) – KPSC FDA Final Selection List 2019 HK

KPSC FDA Final Selection List 2019 HK: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ: ಸಂಖ್ಯೆ: ಇ(2) 3070/2019-20/ಪಿಎಸ್ ಸಿ ದಿನಾಂಕ: 31-01-2020ರ ಅಧಿಸೂಚನೆಗಳನ್ವಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹೈದ್ರಾಬಾದ್-ಕರ್ನಾಟಕ ವೃಂದದ -137 ಪ್ರಥಮ ದರ್ಜೆ ಸಹಾಯಕರ ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಸಹಾಯಕರ/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಆಯೋಗವು ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು 1978 ರನ್ವಯ ದಿನಾಂಕ: 08-02-2022ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು.

ತಾತ್ಕಾಲಿಕ ಆಯ್ಕೆಪಟ್ಟಿಯ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ 07 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಆಯೋಗವು ಸೂಚಿಸಿತ್ತು. ಅದರಂತೆ, ಸ್ವೀಕೃತವಾದ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸಿದ್ದಪಡಿಸಲಾದ ಅಂತಿಮ ಆಯ್ಕೆ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಎಂದು KPSC ಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಅಂತಿಮ ಆಯ್ಕೆ ಪಟ್ಟಿಯ PDF ನ್ನು ಈ ಕೆಳಗಿನ ಡೌನ್‌ಲೋಡ್ ಲಿಂಕ್ ಮೂಲಕ ಪಡೆಯಬಹುದು.

Download PDF

Leave a Comment